ಚಿತ್ರದುರ್ಗ:ಹೊಳಲ್ಕೆರೆ ಕರ್ನಾಟಕ ಫ್ಯಾಮಿಲೀಸ್ ಅಸೋಸಿಯೇಷನ್ ಮನೋರಂಜನಾ ಕೇಂದ್ರದ ಮೇಲೆ ಸರ್ಚ್ ವಾರಂಟ್ ಇಲ್ಲದೆ ಪೊಲೀಸರು ದಾಳಿ ನಡೆಸಿ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದ ಅಸೋಷಿಯೇಷನ್ ಅಧ್ಯಕ್ಷ ನಾಗ ರಾಜ್‌ರನ್ನು ಸ್ಥಳೀಯ ಪೊ ಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ನಾಗರಾಜ್ ಶುಕ್ರವಾರ ಬೆಳಗ್ಗೆ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಕ್ಲಬ್‌ಗೆ ಬರುವಂಥ ಅಸೋಷಿಯೇಷನ್ ಸದಸ್ಯರನ್ನು ತಪಾಸಣೆಗೆ ಒಳಪಡಿಸಿ ಮುಜುಗರಕ್ಕೆ ಈಡು ಮಾಡುತ್ತಿದ್ದಾರೆ. ವಿನಾ ಕಾರಣ ತೊಂದರೆ ಕೊಡುತ್ತಿದ್ದಾರೆ ಇತ್ಯಾದಿ ಪೊಲೀಸರ ವಿರುದ್ಧ ಆರೋಪಗಳನ್ನು ಮಾಡಿದ್ದರು. ಪತ್ರಿಕಾಗೋಷ್ಠಿ ನಡೆಸಿದ ದಿನದಂದೇ ರಾತ್ರಿ ಬಂಧನಕ್ಕೆ ಒಳಗಾಗಿದ್ದ ನಾಗರಾಜ್‌ರನ್ನು ಶನಿವಾರ ಕೋರ್ಟ್‌ಗೆ ಹಾಜರುಪಡಿಸ ಲಾಗಿದ್ದು, ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.
---