ಕುಂದಾಪುರ: ವಂಡ್ಸೆ ಕ್ಲಸ್ಟರ್‌ಮಟ್ಟದ ಕಲಿಕಾ ಹಬ್ಬ ಚಿತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆಯಿತು.
ವಿದ್ಯಾರ್ಥಿ ನಾಯಕಿ ಸಾನ್ವಿತಾ ಸಹಿತ ಎಲ್ಲರೂ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಮೂಕಾಂಬು ಅಧ್ಯಕ್ಷತೆ ವಹಿಸಿದರು. ಉಪಾಧ್ಯಕ್ಷ ರಮೇಶ್ ಆಚಾರ್ಯ, ಚಿತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿರಾಜ ಶೆಟ್ಟಿ, ಉಪಾಧ್ಯಕ್ಷೆ ಸುಬ್ಬು, ಸದಸ್ಯರಾದ ಮಂಜುನಾಥ ದೇವಾಡಿಗ, ಸಿಆರ್‌ಪಿಗಳಾದ ರವಿಚಂದ್ರ, ಶೈಲಜಾ, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ದಿನೇಶ್ ಬೆಳಕಲ್, ಸವಿತಾ ಮುದೂರು, ಪ್ರಸನ್ನ ಕೊಲ್ಲೂರು, ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.
ಎಂ.ನಾಗರಾಜ ಶೆಟ್ಟಿ ಸ್ವಾಗತಿಸಿದರು. ಸತೀಶ್ ಶೆಟ್ಟಿ ಪ್ರಸ್ತಾವನೆಗೈದರು. ರಾಘವೇಂದ್ರ ನಾಯಕ್ ವಂದಿಸಿದರು. ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ, ಉದಯ ಬಳಗಾರ, ಇಂದಿರಾ ಮತ್ತು ಗಣೇಶ್ ಸಹಕರಿಸಿದರು.