ಜಿಲ್ಲೆ

ಕಿತ್ತೂರು ಉತ್ಸವ ಸಮಾರೋಪಕ್ಕೆ ಸಿಎಂ

ಡಿ.ವಿ. ಕಮ್ಮಾರ

ಬೆಳಗಾವಿ: ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ನಡೆಯುತ್ತಿರುವ 201ನೇ ಕಿತ್ತೂರು ವಿಜಯೋತ್ಸವದ ಸಮಾರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿದ್ದಾರೆ.
ಗುರುವಾರದಿಂದ ವಿಜಯೋತ್ಸವದ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಅ.25ರಂದು ಸಂಜೆ 7ಕ್ಕೆ ಜರುಗುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರು ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 4ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಡುವ ಅವರು, ಸಂಜೆ 5ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ರಸ್ತೆ ಮೂಲಕ ಕಿತ್ತೂರಿನ ಕೋಟೆಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ. ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಿ, ವಿಮಾನದ ಮೂಲಕ ಬೆಂಗಳೂರಿಗೆ ಮರಳುವರು ಎಂದು ಪ್ರಕಟಣೆ ತಿಳಿಸಿದೆ.