ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ 11 ಜನರು ಪ್ರಾಣ ಕಳೆದುಕೊಂಡ ಕಾಲ್ತುಳಿತಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಕಾರಣ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರವು ಯಾವುದೇ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದು, ಭ್ರದತಾ ವೈಫಲ್ಯ, ರ್ನಿಲಕ್ಷ$್ಯದಿಂದಲೇ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅವತ್ತಿನ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಇತರೆ ಸಚಿವರು ಪ್ರಮುಖ ಜವಾಬ್ದಾರರಾಗಿದ್ದಾರೆ. ಇವರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ಅಮಾಯಕರು ಮೃತಪಟ್ಟಿದ್ದಾರೆ. ಸರ್ಕಾರವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೇ ಯಾವುದೇ ರೀತಿ ಅವಡ ಸಂಭವಿಸುತ್ತಿರಲಿಲ್ಲ. ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವ ಅಧಿಕಾರಿಗಳನ್ನು ಕೆಲಸದಿಂದಲೇ ವಜಾಗೊಳಿಸಬೇಕು. ಸಿಎಂ, ಡಿಸಿಎಂ ನಡುವಿನ ಒಳ ಜಗಳದಿಂದ ಅಮಾಯಕರು ಮೃತಪಟ್ಟಿದ್ದಾರೆ. ಈ ಕುರಿತು ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯ ಸುಭಾಷ ಪಾಟೀಲ, ನಗರ ಟಕದ ಅಧ್ಯೆ ಗೀತಾ ಸುತಾರ, ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಮಾಜಿ ಶಾಸಕ ಸಂಜಯ ಪಾಟೀಲ್, ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ್, ಸದಾನಂದ ಗುಂಟೆಪ್ಪನವರ, ಉಜ್ವಲಾ ಬಡವನಾಚೆ ಇತರರಿದ್ದರು.