ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಹುದ್ದೆಯಲ್ಲಿ ಅಧಿಕಾರ ನಿರ್ವಹಿಸುತ್ತಾ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತದಿಂದ ಪೋಸ್ಟ್ ಕಾರ್ಡ್ ಬರೆದು ಅಭಿನಂದನೆ ಸಲ್ಲಿಸುವ ಅಭಿಯಾನ ನಡೆದಿದೆ. ಈ ಅಂಗವಾಗಿ ಮೈಸೂರಿನಲ್ಲಿ ಇಂದು ಸೇವೆ ಮತ್ತು ಸಮರ್ಪಣೆ ಉತ್ಸವ ಆಚರಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೋಸ್ಟ್ ಕಾರ್ಡ್ ಬರೆದು ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಲೋಕಸಭಾ ಸದಸ್ಯ ಪ್ರತಾಪಸಿಂಹ, ಶಾಸಕ ನಾಗೇಂದ್ರ, ಮೈಸೂರು ನಗರ ಜಿಲ್ಲಾಧ್ಯಕ್ಷ ಶ್ರೀವತ್ಸ ಮತ್ತು ಇತರ ಕಾರ್ಯಕರ್ತರು ಭಾಗವಹಿಸಿದ್ದರು. ನಂತರ ಕಾರ್ಡುಗಳನ್ನು ಪೋಸ್ಟ್ ಮಾಡಲಾಯಿತು.