ಜಿಲ್ಲೆ

ಹೈಕಮಾಂಡ್​ಗೆ ಎಲ್ಲಿಯವರೆಗೆ ನನ್ನ ಮೇಲೆ ವಿಶ್ವಾಸ ಇರುತ್ತೋ ಅಲ್ಲಿಯವರೆಗೂ ಸಿಎಂ ಆಗಿರುತ್ತೇನೆ: ಸಿಎಂ ಬಿಎಸ್​ವೈ

ಬೆಂಗಳೂರು: ಎಲ್ಲಿವರೆಗೂ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿರುತ್ತೊ ಅಲ್ಲಿಯವರೆಗೂ ನಾನು ಮುಖ್ಯಮಂತ್ರಿಯಾಗಿ ಇರುತ್ತೇನೆ. ನೀವು ಬೇಡ ಎಂದ ದಿವಸ ರಾಜೀನಾಮೆ ಕೊಟ್ಟು ಕೆಳಗಿಳಿದು, ರಾಜ್ಯದ ಅಭಿವೃದ್ಧಿಕೆ ಕೆಲಸ ಮಾಡುತ್ತೇನೆ ಎಂದು ಹೇಳುವ ಮೂಲಕ ರಾಜಕೀಯ ವಿರೋಧಿಗಳಿಗೆ ಸಿಎಂ ಬಿಎಸ್​ವೈ ಖಡಕ್​ ಎಚ್ಚರಿಕೆ ನೀಡಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್​ವೈ, ನನಗೆ ಗೊಂದಲ ಇಲ್ಲ. ಅವಕಾಶ ಮಾಡಿಕೊಟ್ಟಿದ್ದಾರೆ, ಅದನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದೇನೆ. ಉಳಿದಿದ್ದು ಹೈಕಮಾಂಡ್​ಗೆ ಬಿಟ್ಟಿದ್ದು ಎಂದರು.

ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಪರ್ಯಾಯ ನಾಯಕರು ಇಲ್ಲ ಎಂಬುದು ನಾನು ಒಪ್ಪಲ್ಲ. ದೇಶದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಯಾವಾಗಲೂ ಪರ್ಯಾಯ ವ್ಯಕ್ತಿಗಳು ಇರುತ್ತಾರೆ. ಆದರೆ ಹೈಕಮಾಂಡ್ ಎಲ್ಲಿಯವರೆಗೂ ನನ್ನ ಬಗ್ಗೆ ವಿಶ್ವಾಸ ಇಟ್ಟಿರೊತ್ತೊ ಅಲ್ಲಿಯವರೆಗೂ ಸಿಎಂ ಆಗಿರುತ್ತೇನೆ ಎಂದರು.

ರೋಹಿಣಿ ಸಿಂಧೂರಿ ಬೆಳಗ್ಗೆ ಬಂದಿದ್ದರು. ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ರದ್ದು ಮಾಡಲು ಮನವಿ ಮಾಡಿದರು. ಒಮ್ಮೆ ವರ್ಗಾವಣೆ ಮಾಡಿದ್ದನ್ನು ಬದಲಾವಣೆ ಮಾಡೋದಿಲ್ಲ ಎಂದು ನಾನು ಸ್ಪಷ್ಟಪಡಿಸಿದ್ದೇನೆಂದು ತಿಳಿಸಿದರು. (ದಿಗ್ವಿಜಯ ನ್ಯೂಸ್​)