ಜಿಲ್ಲೆ

ಸಿಎಂ ಬಿಎಸ್​ವೈ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪರ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ 7:30ರ ಸುಮಾರಿಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ. ಅವರನ್ನು ಎಂ.ಎಸ್​​ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣವೇನೆಂದ ತಿಳಿದುಬಂದಿಲ್ಲ. ವೈದ್ಯಕೀಯ ತೀವ್ರ ನಿಗಾ ಘಟಕದಲ್ಲಿ ಸಂತೋಷ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಸಿಎಂ ಬಿಎಸ್​ವೈ ಭೇಟಿ

ಸುದ್ದಿ ತಿಳಿದು ಸಿಎಂ ಬಿಎಸ್​ವೈ ಪುತ್ರ ರಾಘವೇಂದ್ರ ಜತೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಯಾಕೆ ಈ ರೀತಿ ಮಾಡ್ಕೊಂಡ ಅನ್ನೊದನ್ನ ಪತ್ತೆ ಹಚ್ಚಬೇಕು. ಘಟನೆಗೆ ಕಾರಣ ಏನು ಅಂತ ನಾಳೆ ಗೊತ್ತಾಗುತ್ತದೆ. ಸಂತೋಷ್ ಪತ್ನಿ ಹಾಗೂ ವೈದ್ಯರ ಜತೆ ಮಾತಾಡಿದ್ದೇನೆಂದು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)