ಜಿಲ್ಲೆ

ಸವಿತ ಸಮಾಜದ ವತಿಯಿಂದ ಸಿಎಂ ಬಿಎಸ್​ವೈ, ವಿಜಯೇಂದ್ರರಿಗೆ ಸನ್ಮಾನ

ಬೆಂಗಳೂರು: ಕರ್ನಾಟಕ ರಾಜ್ಯ ಸವಿತ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಎಸ್ ನರೇಶ್ ರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್​. ಯಡಿಯೂರಪ್ಪನವರಿಗೆ ಹಾಗೂ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ. ವಿಜೇಂದ್ರರವರಿಗೆ ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಸವಿತಾ ಸಮಾಜದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಶ್ರೀಧರನಂದ ಸರಸ್ವತಿ ಸ್ವಾಮೀಜಿಗಳು ಹಾಗೂ ಸವಿತ ಸಮಾಜದ ಬೆಂಗಳೂರು ನಗರದ ಅಧ್ಯಕ್ಷರಾದ ಸಾರ್ಮಾಟ್ ಮಂಜುರವರು ಉಪಸ್ಥಿತರಿದ್ದರು.

ಸವಿತ‌ ಸಮಾಜವು ಕರ್ನಾಟಕದಲ್ಲಿ ಶ್ರಮಿಕವರ್ಗವಾಗಿದ್ದು ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುಧಾನ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.