ಶಿವಮೊಗ್ಗ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವು ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಕಾಂಗ್ರೆಸ್‌ನಲ್ಲೇ ಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಅವರ ಪಕ್ಷದ ನಡುವಳಿಕೆ ನಮಗೆ ಗೊತ್ತಿಲ್ಲ. ಸಿಎಂ ಬದಲಾವಣೆ ಬಗ್ಗೆ ಅವರೇ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಆಡಳಿತ ನಿಯಂತ್ರಣ ಮೇಲೆ ಪರಿಣಾಮ ಬೀರುತ್ತಿದೆ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಆಗುತ್ತಿಲ್ಲ. ಪ್ರತಿನಿತ್ಯ ಇದೇ ರೀತಿ ಮುಂದುವರಿದರೆ ಅಧಿಕಾರಿಗಳು ಮಾತು ಕೇಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಅಭಿವೃದ್ಧಿ ವಿಷಯಕ್ಕಿಂತ ಬೇರೆಯದ್ದೇ ವಿಷಯಗಳ ಬಗ್ಗೆ ಬರ್ಚೆ ಆಗುತ್ತಿದೆ. ಹಲವಾರು ಯೋಜನೆಯ ಜಾರಿಯಲ್ಲಿ ಲೋಪದೋಷಗಳಿವೆ. ಇಂತಹ ಪರಿಸ್ಥಿತಿ ಹಿಂದೆಂದೂ ಇರಲಿಲ್ಲ. ಆಡಳಿತ ಪಕ್ಷದ ಕೊನೆಯಲ್ಲಿ ಅದರ ಬಗ್ಗೆ ಟೀಕೆ ಟಿಪ್ಪಣಿ ಸಹಜ. ಆದರೆ ಈ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ವರ್ಷ ಕಳೆಯುವ ಮೊದಲೇ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ಹಿಂದಿನ ಸರ್ಕಾರದ ಮೇಲೆ ಕೇಳಿಬರುತ್ತಿದ್ದ ಶೇ.40ಗಿಂತ ಹೆಚ್ಚು ಭ್ರಷ್ಟಾಚಾರ ಈಗ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.