ಜಿಲ್ಲೆ

ಗಿಮಿಕ್ ರಾಜಕೀಯ ಮಾಡುವ ಸಿಎಂ

ಅವಿನಾಶ್ ಜೈನಹಳ್ಳಿ

ಮೈಸೂರು: ಬರಗಾಲ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಟೀಕಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಲು ಆಗುವುದಿಲ್ಲ. ಈ ವಿಚಾರ ಗೊತ್ತಿದ್ದರೂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದು ಕೇವಲ ರಾಜಕೀಯ ಗಿಮಿಕ್ ಅಷ್ಟೆ ಎಂದರು.

ಕೇಂದ್ರ ಗೃಹ ಸಚಿವರಿಗೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಡಲು ಸಾಕಷ್ಟು ಕೆಲಸಗಳಿವೆ. ಇದರ ಮಧ್ಯೆ ಇವರೊಂದಿಗೆ ಚರ್ಚಿಸಲು ಸಮಯವಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ. ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಎಂದು ಟೀಕಿಸಿದರು.