ಮೈಸೂರು: ಅಹಿಂದದಿಂದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು, ಪಕ್ಷಾಂತರಿಗಳು-ಮೇಲ್ವರ್ಗದವರಿಗೆ ಮಣೆ ಹಾಕುತ್ತಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.
ಅಹಿಂದ ವರ್ಗಗಳ ಮತಗಳಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೂ ಮೇಲ್ವರ್ಗದವರನ್ನೇ ಓಲೈಸುತ್ತಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆದು ಕಾಂಗ್ರೆಸ್ ಅಭ್ಯರ್ಥಿಯನ್ನೇ ಗೆಲ್ಲಿಸಬೇಕು ಎಂದು ಸೂಚಿಸಿದ್ದಾರೆ. ಪಕ್ಷಾಂತರಿಗೆ ಮಣೆ ಹಾಕುವ ಮೂಲಕ ದಲಿತರ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮೇಲ್ಮನೆಗೆ ಬುದ್ಧಿಜೀವಿಗಳು, ವಿಚಾರವಂತರು, ಸಾಹಿತಿಗಳು, ವಿಜ್ಞಾನಿಗಳು, ಶಿಕ್ಷಣ ತಜ್ಞರು ಮೊದಲಾದವರು ಆಯ್ಕೆಯಾಗಬೇಕಾಗಿದೆ. ಆದರೆ ಸಿದ್ದರಾಮಯ್ಯ ಅವರು ಈ ಆಶಯಗಳನ್ನು ಗಾಳಿಗೆ ತೂರಿದ್ದಾರೆ ಎಂದು ದೂರಿದರು.
ಮುಖಂಡರಾದ ಕುಮಾರ, ಕೆಂಪಶೆಟ್ಟಿ, ಶಿವರಾಜಪ್ಪ ಇದ್ದರು.