ಜಿಲ್ಲೆ

ದೆಹಲಿಯಲ್ಲಿ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಭೇಟಿಯಾದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು/ದೆಹಲಿ: ಕ್ರಿಕೆಟ್​ ಲೋಕದ ದಂತಕತೆ ಸಚಿನ್​ ತೆಂಡೂಲ್ಕರ್​ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕಸ್ಮಿಕವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದ ಅಪರೂಪದ ಪ್ರಸಂಗ ಇಂದು ಜರುಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ ಎಂದು ಹೇಳಿದ್ದಾರೆ.

ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದು ದೆಹಲಿಗೆ ಹೋಗಿದ್ದೇಕೆ?

ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿಂದು ಚುನವಣಾ ಪ್ರಣಾಳಿಕೆ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಸಚಿನ್​ ಅವರನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು ಕ್ರಿಕೆಟ್​ ಪ್ರೇಮಿ ಎಂಬುದು ಎಲ್ಲರಿಗೂ ತಿಳಿದಿದೆ. ಅನೇಕ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಪಂದ್ಯಗಳನ್ನು ವೀಕ್ಷಣೆ ಮಾಡಿದ್ದಾರೆ.