ಜಿಲ್ಲೆ

ದ್ವೇಷದ ಪಿತೂರಿಗೆ ಮಹನೀಯರ ಆಶಯ ಬಲಿಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ

Bengaluru - General - Rama Kishan K V

ಬೆಂಗಳೂರು: ಕರ್ನಾಟಕ ಕುವೆಂಪು, ಅಂಬೇಡ್ಕರ್​, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್​ನಲ್ಲಿ ಭಾನುವಾರ ನಡೆದ ಸೇಂಟ್​ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲ ಜಾತಿ, ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾ. ಬೆಸಿಲಿಕಾ ಚರ್ಚ್​ನ ಪುನರುಜ್ಜೀವನಕ್ಕೆ 5 ಕೋಟಿ ರೂ. ನೆರವು ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಶಾಸಕ ರಿಜ್ವಾನ್​ ಅರ್ಷದ್​, ಆರ್ಚ್​ ಬಿಷಪ್​ ಡಾ.ಪೀಟರ್​ ಮಚಾಡೊ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರಿದ್ದರು.