ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಅನಾರೋಗ್ಯದಿಂದ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿರುವ ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾಂಗೆ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.