ವಿಜಯಪುರ: ಚಡಚಣ ತಾಲೂಕಿನ ಇಂಚಗೇರಿ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸಲಿರುವ ಹಿನ್ನೆಲೆ ಶುಕ್ರವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿತು.
ಜೂ.16 ರಂದು ಸಿಎಂ ಸಿದ್ದರಾಮಯ್ಯ ಇಂಚಗೇರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಮತ್ತು ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ, ಹೆಲಿಪ್ಯಾಡ್ ವ್ಯವಸ್ಥೆ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಜಿಪಂ ಸಿಇಒ ರಿಷಿ ಆನಂದ, ಎಸ್‌ಪಿ ಋಷಿಕೇಶ ಸೋನಾವಣೆ, ಇಂಡಿ ಉಪವಿಭಾಗಾಧಿಕಾರಿ ಆಬಿದ ಗದ್ಯಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ ಮತ್ತಿತರರಿದ್ದರು.