ಜಿಲ್ಲೆ

ಮೇ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲೆಗೆ

Mangaluru - Hariprasad Rai


ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಮಧ್ಯಾಹ್ನ 3.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 3.35 ನಗರದ ಉರ್ವ ಮಾರ್ಕೆಟ್‌ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ , ಸಾಯಂಕಾಲ
4.15ಕ್ಕೆ ಪಡೀಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ಪ್ರಜಾ ಸೌಧ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ, 6.30ಕ್ಕೆ ಉಳ್ಳಾಲ ಸೈಯದ್ ಮಹಮ್ಮದ್ ಶರೀಫ್ ಫುಲ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ 8.25ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.