ಬಾದಾಮಿ: ಪಂಚ ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಆಗ್ರಹಿಸಿದರು.
ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಿಂದ ಆಡಳಿತ ನಡೆಸುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ. ಪಂಚ ಗ್ಯಾರಂಟಿ ಯೋಜನೆಯಿಂದ ದುಡ್ಡು ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ವೇದಿಕೆಯಲ್ಲಿ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು.
ಬಿಜೆಪಿ ಸರ್ಕಾರದ ವಿರುದ್ಧ ಶೇ.40 ಭ್ರಷ್ಟಾಚಾರದ ಆರೋಪ ಮಾಡಿ ಅಧಿಕಾರಕ್ಕೆ ಬಂದು ಅವರೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸ್ವಚ್ಛ ಮತ್ತು ಅಭಿವೃದ್ಧಿ ಆಡಳಿತ ನಡೆಸುತ್ತೇವೆ ಎಂದು ಪ್ರಮಾಣ ವಚನ ಮಾಡಿದ ನೀವು ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡತ್ತಿದೀರಿ ಎಂದು ಅವಲೋಕನ ಮಾಡಿಕೊಳ್ಳಬೇಕು ಎಂದು ಜರಿದರು.
ಬಾದಾಮಿ ಕ್ಷೇತ್ರದಲ್ಲಿ ಮರಳು ಅಕ್ರಮ ಗಣಿಗಾರಿಕೆ, ಪ್ರತಿ ಗ್ರಾಮಗಳಲ್ಲಿ ಬಹಿರಂಗ ಸಾರಾಯಿ ಮಾರಾಟ, ಎಲ್ಲ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಚಿವ ಜಮೀರ್ ವಿರುದ್ಧ ಲಂಚದ ಆರೋಪವಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಚಂದ್ರಶೇಖರ ಶೇಖಾ, ಅಜೀಜ ಮುಲ್ಲಾ, ಎಂ.ಎಸ್. ಹಿರೇಹಾಳ, ತಯಬ್ ಅಲಿ ಖಲೀಾ, ಹುಚ್ಚೇಶ ಆಡಗಲ್, ಚನ್ನಪ್ಪ ಮೇಟಿ ಚಂದ್ರ ಸೂಡಿ, ಪ್ರಕಾಶ ಕೋಟಿ, ಸಂತೋಷ ನಾಯನೇಗಲಿ, ಅರ್ಜುನ್ ಮಲ್ಲಿಕಾರ್ಜುನ ಹಡಪದ, ಬಸವರಾಜ ಮಾತನಾಡಿದರು.