ಜಿಲ್ಲೆ

ಬೆಳಗಾವಿಗೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಳಗಾವಿಗೆ ಶನಿವಾರ ಸಿಎಂ ಸಿದ್ದರಾಮಯ್ಯ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅ.4ರಂದು ಶನಿವಾರ ಬೆಳಗಾವಿಗೆ ಆಗಮಿಸುತ್ತಿದ್ದು, ವಿವಿಧ ಯೋಜನೆ, ಕಾಮಗಾರಿ ಹಾಗೂ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ‌ ಹೊರಡುವ ಅವರು, 11.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ರಸ್ತೆ ಮೂಲಕ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ನಡೆಯುವ ಸಮಾರಂಭಕ್ಕೆ ರಸ್ತೆ ಮೂಲಕ ಆಗಮಿಸುವರು. ಮಧ್ಯಾಹ್ನ 12.10ಕ್ಕೆ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಬಿಮ್ಸ್ ಆವರಣದಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಹೊಸ. ಆವರಣದಲ್ಲಿ ಪಿಎಂ-ಉಷಾ ಯೋಜನೆಯ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿದ ವಿವಿ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.
ಬಳಿಕ ಮಧ್ಯಾಹ್ನ 2.15ಕ್ಕೆ ಸರ್ಕ್ಯೂಟ್ ಹೌಸ್‌ಗೆ ತೆರಳುವ ಸಿಎಂ, ಸಂಜೆ 4.30ಕ್ಕೆ ಸಾಂಬ್ರಾದಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.