ಜಿಲ್ಲೆ

ಸಿಎಂ ಗಟ್ಟಿಯಾಗಿದ್ದಾರೆ, ಆರೋಗ್ಯ ಸಚಿವರು ಹೀಗಂದಿದ್ಯಾಕೆ?

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್​ ಮುಖ್ಯಮಂತ್ರಿ ಗಟ್ಟಿಯಾಗಿದ್ದಾರೆ. ಅವರ ಬಗ್ಗೆ ಅಗೌರವವಾಗಿ ಮಾತನಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

ನಗರದ ಶ್ರೀದೇವಿ ವೈದ್ಯಕಿಯ ಮತ್ತು ಸಂಶೋಧಾನ ಕೇಂದ್ರದಲ್ಲಿ ಬುಧವಾರ 2ನೇ ಕ್ಯಾತ್​ಲಾಬ್​ ಉದ್ಘಾಟನೆ ಸಂದರ್ಭದಲ್ಲಿ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಅವರ ಬದಲಾವಣೆ ಚರ್ಚೆ ಅಪ್ರಸ್ತುತ. ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ವಿನಾ ಕಾರಣ ಪದೇ ಪದೇ ಆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರದಲ್ಲು ಹೈಕಮಾಂಡ್​ ತೀಮಾರ್ನವೇ ಅಂತಿಮ. ವರಿಷ್ಠರನ್ನು ಭೇಟಿ ಮಾಡುವುದು, ಕೇಳುವುದರಲ್ಲಿ ತಪ್ಪೇನಲ್ಲ. ಆದರೆ, ಈ ಎಲ್ಲ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್​ ತೆಗೆದುಕೊಳ್ಳುವ ತೀಮಾರ್ನ ಕೈಗೊಳ್ಳುತ್ತದೆ. ಅದಕ್ಕೆ ನಾವೆಲ್ಲರೂ ಬದ್ಧವಾಗಿದ್ದೇವೆ. ಇದನ್ನೆಲ್ಲಾ ಬಹಿರಂಗವಾಗಿ, ಸಾರ್ವಜನಿಕರವಾಗಿ ಚರ್ಚೆ ಮಾಡುವುದಲ್ಲ ಎಂದು ನಾಲಿಗೆ ಹರಿಬಿಡುತ್ತಿರುವ ಸ್ವಪಯರಿಗೆ ಪರೋಕ್ಷ$ವಾಗಿ ಟಾಂಗ್​ ಕೊಟ್ಟರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್​ ದೆಹಲಿಗೆ ಏಕೆ ಹೋಗಿದ್ದಾರೆ ಎಂಬ ಬಗ್ಗೆ ನಮಗೇನು ಗೊತ್ತು, ಸಚಿವರುಗಳು ದೆಹಲಿಗೆ ಹೋಗುವುದು ದೊಡ್ಡ ಸುದ್ದಿಯೇನಲ್ಲ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ತೀಕ್ಷವಾಗಿ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಬಾಣಂತಿಯರ ಸಾವುಗಳು ಆಗಿರುವುದು ಗಂಭೀರವಾದ ವಿಷಯ. ಈ ಕುರಿತು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಬಾಣಂತಿಯರ ಸಾವು ಏಕೆ ಆಯ್ತು, ತಡೆಗಟ್ಟಬಹುದಾಗಿತ್ತಾ, ಲೋಪದೋಷಗಳಾಗಿದೆಯಾ ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕುರಿತ ತನಿಖೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಸಿಬ್ಬಂದಿ, ತಜ್ಞರನ್ನು ನೇಮಿಸಲಾಗಿದೆ. ಡಿಸೆಂಬರ್​, ಜನವರಿ, ಫೆಬ್ರವರಿ ತಿಂಗಳಲ್ಲಿ ಬಾಣಂತಿಯರ ಸಾವಿನ ಪ್ರಮಾಣ ಇಳಿಕೆಯಾಗಿದೆ. ಈ ಬಗ್ಗೆ ನಾವು ಹೆಚ್ಚಿನ ಒತ್ತು ನೀಡಿದ್ದೇವೆ ಎಂದು ಹೇಳಿದರು.

ತುಮಕೂರು ಜಿಲ್ಲಾಸ್ಪತ್ರೆಗೆ ಹೊಸ ರೂಪ ಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್​ ಅವರು ಹೇಳಿದ್ದಾರೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಬಿಜಿಎಸ್​ ದೃಢ ಇಲ್ಲ: ಚಿಕ್ಕೋಡಿಯಲ್ಲಿ ಗಿಯಾನ್​ ಬಾರೆ ಸಿಂಡ್ರೋಮ್​ (ಬಿಜಿಎಸ್​)ಗೆ ವೃದ್ಧರೊಬ್ಬರು ಬಲಿಯಾಗಿದ್ದು ಇದು ಇನ್ನೂ ಖಚಿತವಾಗಿಲ್ಲ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ದಿನೇಶ್​ ಗುಂಡೂರಾವ್​ ಸ್ಪಷ್ಟಪಡಿಸಿದರು.