ಮಡಿಕೇರಿ:
ಆದಿಮಸಂಜಾತ ಏಕ-ಜನಾಂಗೀಯ ಕೊಡವರ ಪವಿತ್ರ ಜಲದೇವತೆ ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯನ್ನು ಕೊಡವರ ಪವಿತ್ರ ಯಾತ್ರಾಸ್ಥಳವೆಂದು ಗುರುತಿಸುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ.
ಈ ಸಂಬAಧ ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಆದಿಮಸಂಜಾತ ಏಕ-ಜನಾಂಗೀಯ ಕೊಡವರು, ಆನಿಮಿಸ್ಟಿಕ್ ನಂಬಿಕೆಯುಳ್ಳವರಾಗಿದ್ದು ಅವರ ಎಲ್ಲಾ ಜಾನಪದ ಆಚರಣೆಗಳು ಪವಿತ್ರ ಜಲದೇವತೆ ಹಾಗೂ ಜೀವನಾಡಿ ಕಾವೇರಿ ನದಿಯ ಸುತ್ತ ಸುತ್ತುತ್ತವೆ.
ಆದ್ದರಿಂದ ಸರ್ಕಾರ ಜೆರುಸಲೆಮ್‌ನಲ್ಲಿರುವ ಯಹೂದಿಗಳ ದೇವಾಲಯ ಮೌಂಟ್ ಮೊರಿಯಾದ ಮಾದರಿಯಲ್ಲಿ ತಲಕಾವೇರಿಯನ್ನು ಕೊಡವರ ಪವಿತ್ರ ತೀರ್ಥಯಾತ್ರಾ ಸ್ಥಳವೆಂದು ಗುರುತಿಸಬೇಕೆಂದು ಒತ್ತಾಯಿಸಿ ರಾಷ್ಟçಪತಿ, ಪ್ರಧಾನಮಂತ್ರಿ, ಕೇಂದ್ರ ಗೃಹಮಂತ್ರಿ, ಮುಖ್ಯಮಂತ್ರಿ ಹಾಗೂ ವಿಶ್ವರಾಷ್ಟç ಸಂಸ್ಥೆಯ ಮಹಾ ಕಾರ್ಯದರ್ಶಿಗಳಿಗೆ ಜ್ಞಾಪನಾ ಪತ್ರ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಆದಿಮಸಂಜಾತ ಕೊಡವರು ಅ.17 ರಂದು ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಮತ್ತು ಆಚರಿಸಲು ಸಜ್ಜಾಗಿದ್ದಾರೆ. ಆನಿಮಿಸ್ಟಿಕ್ ನಂಬಿಕೆಯುಳ್ಳ ಆದಿಮಸಂಜಾತ ಕೊಡವರು ಪವಿತ್ರ ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಸಿಎನ್‌ಸಿ ಸಂಘಟನೆ ಕೊಡವರ ಮಹತ್ವದ ಆಧ್ಯಾತ್ಮಿಕ ಮತ್ತು ಕಾನೂನುಬದ್ಧ ಆಕಾಂಕ್ಷೆಗಳನ್ನು ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಮುಂದೆ ಮಂಡಿಸುತ್ತಿದೆ ಎಂದು ಹೇಳಿದ್ದಾರೆ.