ಜಿಲ್ಲೆ

ಸಹಪಠ್ಯ ಚಟುವಟಿಕೆಗಳಿಂದ ಕ್ರಿಯಾಶೀಲತೆ : ಮಂಜುನಾಥನ್ ಎಂ.ಜಿ. ಬಣ್ಣನೆ

ಸೌಮ್ಯ ಆರ್

ಬಂಟ್ವಾಳ: ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲರಾಗಿರಬೇಕು. ಉತ್ತಮ ಹವ್ಯಾಸ ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಹೇಳಿದರು.

ದೀಪಿಕಾ ಪ್ರೌಢಶಾಲೆ ಮೊಡಂಕಾಪುವಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ, ಕರ್ನಾಟಕ ಶಿಕ್ಷಕರ ಕಲ್ಯಾಣ ಇಲಾಖೆ, ಬೆಂಗಳೂರು ರಾಷ್ಟ್ರೀಯ ಶಿಕ್ಷಕರ ಪ್ರತಿಷ್ಠಾನ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಮೊಡಂಕಾಪು ಚರ್ಚ್‌ನ ಧರ್ಮಗುರು ಫ್ರಾನ್ಸಿಸ್ ಶುಭ ಹಾರೈಸಿದರು. ಸಂಪನ್ಮೂಲ ಕೇಂದ್ರಗಳ ಸಮನ್ವಯಾಧಿಕಾರಿ ವಿದ್ಯಾ ಮಾನ್ಯ, ಸಹಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಪ್ರೇಮಾ, ಜಿ.ಪಿ.ಟಿ. ಸಂಘದ ಕಾರ್ಯದರ್ಶಿ ರಾಜೇಶ್, ಸರ್ಕಾರಿ ಪ್ರೌಢಶಾಲೆ ಪೊಳಲಿಯ ಸುಮನಾ, ನಿವೃತ್ತ ಶಿಕ್ಷಕರಾದ ಮಹಾಬಲೇಶ್ವರ ಹೆಬ್ಬಾರ್, ಜಯಾನಂದ ಪೆರಾಜೆ, ಬಿ.ರಾಮಚಂದ್ರ ರಾವ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಸುಜಾತ ಕಾರ್ಯಕ್ರಮ ನಿರೂಪಿಸಿದರು.