ಕೋಟ: ನಮ್ಮ ದೇಶದ ಕಲ್ಚರೆ ಅಗ್ರಿಕಲ್ಚರ್ ಆಗಿತ್ತು. ಆದರೆ ಈಗ ಮಕ್ಕಳಿಗೆ ಕೃಷಿ ಬಗ್ಗೆ ಮಾಹಿತಿ ಇಲ್ಲದಂತಾಗಿದೆ. ಆದ್ದರಿಂದ ನಮ್ಮ ತುಳುನಾಡಿನ ಮಕ್ಕಳಿಗೆ ಕೃಷಿ ಬಗ್ಗೆ ಆಸಕ್ತಿ ಬರಲು ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಕ್ರಮ ಜಿಲ್ಲಾದ್ಯಂತ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಎಲ್ಲೂರು ಶಶಿಧರ್ ಶೆಟ್ಟಿ ಹೇಳಿದರು.
ಜಿಲ್ಲಾ ಕಿಸಾನ್ ಕಾಂಗ್ರೆಸ್ ಹಾಗೂ ಕೋಟ ಬ್ಲಾಕ್ ಕಿಸಾನ್ ಕಾಂಗ್ರೆಸ್ ವತಿಯಿಂದ ಕೋಟ ಬ್ಲಾಕ್ ವ್ಯಾಪ್ತಿಯ ಪಾರಂಪಳ್ಳಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ತೆಂಗಿನ ಸಸಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋಟ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಂಚಾಲಕ ಭಾಸ್ಕರ ಶೆಟ್ಟಿ ತೆಕ್ಕಟ್ಟೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶೇಖರ್ ಕೋಟ್ಯಾನ್ ಉದ್ಯಾವರ ಉಪಸ್ಥಿತರಿದ್ದರು. ಬಾಲಕೃಷ್ಣ ಪೂಜಾರಿ ಕೋಟ ಮಕ್ಕಳಿಗೆ ಕೃಷಿ ಬಗ್ಗೆ ಮಾಹಿತಿ ನೀಡಿದರು.
ಕಾರ್ಮಿಕ ಘಟಕ ಅಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಹನಾಜ್, ಸ್ಥಳೀಯ ರೈತರಾದ ಪ್ರಜ್ವಲ್ ಐತಾಳ್, ರಾಜು ಪೂಜಾರಿ, ಪ್ರಕಾಶ್ ಪೂಜಾರಿ, ಗೌರವ ಶಿಕ್ಷಕಿಯರಾದ ರೇಖಾ, ನಾಜೀಯಾ, ಮಾಲತಿ ಡಿ.ಕೆ., ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಸಿ.ರಾಘವೇಂದ್ರ ಹೊಳ್ಳ ನಿರ್ವಹಿಸಿದರು.