ಜಿಲ್ಲೆ

ಬುಡಸಮೇತ ಧರೆಗುರುಳಿದ ತೆಂಗಿನ ಮರ

Hassan

ಚನ್ನರಾಯಪಟ್ಟಣ: ತಾಲೂಕಿನ ಹಲವೆಡೆ ಸೋಮವಾರ ರಾತ್ರಿ ಗಾಳಿ ಸಹಿತ ಸುರಿದ ಮಳೆಗೆ ಬಾಳೆ ಬೆಳೆ ಧರೆಗುರುಳಿದ್ದು, ಮುಸುಕಿನ ಜೋಳದ ಬೆಳೆ ಸಂಪೂರ್ಣವಾಗಿ ನೆಲ ಕಚ್ಚಿದೆ.

ಮೂರು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಅಲ್ಲಲ್ಲಿ ಸುರಿದ ಮಳೆಗೆ ಸುಮಾರು 300ಕ್ಕೂ ಹೆಚ್ಚು ತೆಂಗಿನ ಮರಗಳು ಬುಡಸಮೇತ ಧರೆಗುರುಳಿವೆ. ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಮರಗಳು ಉರುಳಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಅರ್ಧಕ್ಕೆ ಮುರಿದು ಬಿದ್ದಿದ್ದು, ಸದ್ಯ ಸರಿಪಡಿಸಿ ವಿದ್ಯುತ್ ಸಂಪರ್ಕ ಸಮಸ್ಯೆ ಬಗೆಹರಿಸಲಾಗಿದೆ.

ಚುರುಕುಗೊಂಡ ಕೃಷಿ ಚಟುವಟಿಕೆ: ತಾಲೂಕು ವ್ಯಾಪ್ತಿಯಲ್ಲಿ ವಾಡಿಕೆಯಂತೆ ಮಳೆಯಾಗದ ಕಾರಣ ಉದ್ದು, ಹಲಸಂದೆ, ಮುಸುಕಿನ ಜೋಳ ಸೇರಿ ಯಾವುದೇ ಬೆಳೆಗಳು ಬಿತ್ತನೆಗೊಂಡಿರಲಿಲ್ಲ. ಇದೀಗ ಮೂರು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.