ಬಳ್ಳಾರಿ ; ಕ್ಷಯ ಮುಕ್ತ ದೇಶಕ್ಕಾಗಿ ಜನರು ಉಚಿತ ಆರೋಗ್ಯ ತಪಾಸಣೆಗೆ ಒಳಗಾಗಿ ರೋಗ ಪತ್ತೆ ಮತ್ತು ಚಿಕಿತ್ಸೆಗೆ ನೆರವಾಗಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕಾರ್ಯದರ್ಶಿ ಕೆ.ಸಿ. ಸುರೇಶ್‌ಬಾಬು ಹೇಳಿದರು.
ನಗರದ ಬಿಡಿಸಿಸಿ ಕಚೇರಿಯ ಉಚಿತ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಏಳು ದಿನಗಳವರೆಗೆ ಹಮ್ಮಿಕೊಂಡಿರುವ ಉಚಿತ ಟಿ.ಬಿ.(ಕ್ಷಯರೋಗ) ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಕುಟುಂಬದ ಉತ್ತಮ ಆರೋಗ್ಯವು ಸಮಾಜದಲ್ಲಿನ ಸಾಮಾಜಿಕ, ಆರ್ಥಿಕ ಮತ್ತು ಆರೋಗ್ಯದ ವಾಸ್ತವಾಂಶವನ್ನು ಪ್ರತಿನಿಧಿಸುತ್ತದೆ. ಕಾರಣ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಇರಲು ಆದ್ಯತೆ ನೀಡಬೇಕು ಎಂದರು.
ಬಳಿಕ ಕೂಲಿ ಕಾರ್ಮಿಕರು, ಹಮಾಲಿ, ರೈತರು ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.