ಮಂಗಳೂರು: ಜನಸಂಖ್ಯೆ ನಿಯಂತ್ರಣ ಒಂದು ಸಹಜ ಪ್ರಕ್ರಿಯೆಯಾಗಿರಬೇಕು. ಮಾನವ ಕುಲದ ಉಳಿವು, ಅಭಿವೃದ್ಧಿಗೆ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಮಂಗಳವಾರ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕಿಶೋರ್ ಕುಮಾರ್ ಎಂ ಮಾತನಾಡಿ, ಕುಟುಂಬ ಯೋಜನೆಗೂ ಕುಟುಂಬದ ಆರೋಗ್ಯಕ್ಕೂ ಸಂಬಂಧವಿದೆ ಎಂದು ಅಭಿಪ್ರಾಯಪಟ್ಟರು. ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಮಾತನಾಡಿ, ಎರಡು ಮಕ್ಕಳ ಜನನದ ನಡುವೆ ಆರೋಗ್ಯಕರ ಅಂತರ ಕಾಪಾಡಿಕೊಳ್ಳುವುದು ತಾಯಿಗೂ, ಮಗುವಿಗೂ ಒಳ್ಳೆಯದು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕುಟುಂಬ ಯೋಜನೆ ಜಾರಿಗೊಳಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಧ್ಯಕ್ಷತೆ ವಹಿಸಿದ್ದರು. ವಿವಿ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಡಾ.ರಾಮಕೃಷ್ಣ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಸ್ವಾಗತಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಕುಮಾರ್ ವಂದಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರೊಬೆಷನರಿ ಜಿಲ್ಲಾಧಿಕಾರಿ ಮುಕುಲ್ ಜೈನ್, ಕಾಲೇಜಿನ ಎನ್.ಸಿ.ಸಿ ಅಧಿಕಾರಿಗಳಾದ ಪ್ರೊ.ಯತೀಶ್ ಕುಮಾರ್, ಡಾ. ಜಯರಾಜ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಜಯವಂತ್ ನಾಯಕ್, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ಧಿಕ್, ಎನ್‌ಎಸ್‌ಎಸ್ ಅಧಿಕಾರಿಗಳಾದ ಡಾ.ಗಾಯತ್ರಿ ಹಾಗೂ ಡಾ.ಸುರೇಶ್ ಉಪಸ್ಥಿತರಿದ್ದರು.