ಜಿಲ್ಲೆ

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಾಲಕರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಬಾಲಕರು ಮತ್ತು ಬಾಲಕಿಯರ ಖೋ- ಖೋ ಪಂದ್ಯಾವಳಿಯಲ್ಲಿ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಟೂರ್ನಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ತಿಳಿಸಿದ್ದಾರೆ.