ಜಿಲ್ಲೆ

ಕಾಲೇಜಿಗೆ ತೆರಳಲು ನಗರ ಸಾರಿಗೆ ಸೌಲಭ್ಯ ಕಲ್ಪಿಸಿ

Chitradurga

ಹೊನ್ನಾಳಿ: ನಗರ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಪಟ್ಟಣದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ವಿಸ್ತಾರವಾಗಿ ಬೆಳೆಯುತ್ತಿರುವ ಪಟ್ಟಣದಲ್ಲಿ ಬಸ್ ಸೌಕರ್ಯ ಕಲ್ಪಿಸುವುದು ಅವಶ್ಯವಿದೆ. ಕಾಲೇಜು, ಆಸ್ಪತ್ರೆ, ಕೋರ್ಟ್ ಸೇರಿ ವಿವಿಧ ಸ್ಥಳಗಳಿಗೆ ತೆರಳಲು ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಈಗಾಗಲೇ ಬಹುತೇಕ ಹಳ್ಳಿಗಳಿಗೆ ಸರ್ಕಾರಿ ಬಸ್ ಕಲ್ಪಿಸಿದ್ದು, ಇನ್ನೂ ಹತ್ತು ವಾಹನಗಳ ಅಗತ್ಯವಿದೆ. ಈ ಕುರಿತು ಇಲಾಖೆಗೆ ಮನವರಿಕೆ ಮಾಡಲಾಗಿದೆ. ಅದು ಪೂರ್ಣಗೊಂಡ ನಂತರ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೆಎಸ್‌ಆರ್‌ಟಿಸಿ ಎಂಡಿಗೆ ದೂರವಾಣಿ ಕರೆ ಮಾಡಿದ ರೇಣುಕಾಚಾರ್ಯ, ಹೊನ್ನಾಳಿ ಹಾಗೂ ಮಲದೇವರ ಕಟ್ಟೆಯಲ್ಲಿರುವ ಐಟಿಐ, ಡಿಪ್ಲೊಮಾ ಕಾಲೇಜು ಸೇರಿ ಸುತ್ತಮುತ್ತಲ ಪ್ರದೇಶಗಳಿಗೆ ಬಸ್ ಸೌಕರ್ಯ ಕಲ್ಪಿಸುವಂತೆ ಸೂಚಿಸಿದರು.