ಪಿರಿಯಾಪಟ್ಟಣ ತಾಲೂಕು ರಾವಂದೂರು, ಕರ್ನಾಟಕ ಪಬ್ಲಿಕ್ ಶಾಲೆಯ ಕಾಲೇಜು ವಿಭಾಗದಲ್ಲಿ ಪ್ರಸ್ತುತ ವರ್ಷದ ಕಾಲೇಜು ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. 
ಜಿಲ್ಲೆ

ಕಾಲೇಜು ಶಿಕ್ಷಣ ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟ

ರಾವಂದೂರು: ಕಾಲೇಜಿನ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯದ ಮುಖ್ಯ ಘಟ್ಟ ಎಂದು ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆರ್.ವಿ.ವಿಶ್ವನಾಥ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕು ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಸ್ತುತ ವರ್ಷದ ಕಾಲೇಜು ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಗಮನವನ್ನು ಬೇರೆಡೆಗೆ ವ್ಯರ್ಥ ಮಾಡದೆ ತಮಗೆ ಸಿಕ್ಕ ಸಮಯವನ್ನು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸುವ ಮೂಲಕ ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಂಶುಪಾಲ ವೆಂಕಟೇಶ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ತಮಗೆ ಜ್ಞಾನರ್ಜನೆಗೆ ಬೇಕಾಗುವ ಎಲ್ಲ ರೀತಿಯ ಸಹಕಾರ ಉಪನ್ಯಾಸಕರು ನೀಡಲಿದ್ದು, ಅದನ್ನು ಸದುಪಯೋಗಪಡಿಸಿಕೊಂಡು ತಮ್ಮ ಉತ್ತಮ ಉಜ್ಜಲ ಭವಿಷ್ಯ ರೂಪಿಸಿಕೊಳ್ಳುವ ಕಡೆ ಹೆಚ್ಚು ಗಮನ ಹರಿಸಬೇಕು. ನಿಮಗೋಸ್ಕರ ಸರ್ಕಾರವು ಹಲವಾರು ಯೋಜನೆ ರೂಪಿಸಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಸುರೇಶ್, ಮುಖ್ಯಶಿಕ್ಷಕಿ ಲಿಲ್ಲಿ ಮೇರಿ, ಉಪನ್ಯಾಸಕರಾದ ಸುಭಾಷ್, ಲಕ್ಷ್ಮೀಕಾಂತ್, ರವಿ, ಗಣೇಶ್, ಶಶಿ, ನೇತ್ರಾವತಿ, ನವೀನ್‌ಕುಮಾರ್, ಶ್ವೇತಾ, ನಂದಿನಿ, ಸೌಮ್ಯಾ, ಪ್ರಮೋದ್, ವಸಂತ್ ಸೇರಿದಂತೆ ಉಪನ್ಯಾಸಕರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ವಿದ್ಯಾರ್ಥಿಗಳು ಇದ್ದರು.