ಮಂಡ್ಯ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಫೆ.7 ರಿಂದ 27 ರವರೆಗೆ ಉದರ ದರ್ಶಕ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
7ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, 13ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, 14ರಂದು ಕೆ.ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, 16ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರ, 17ರಂದು ಮದ್ದೂರು ಸರ್ಕಾರಿ ಆರೋಗ್ಯ ಕೇಂದ್ರ, 20ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, 21ರಂದು ಪಾಂಡವಪುರ ಉಪ ವಿಭಾಗ ಆಸ್ಪತ್ರೆ, 22ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, 23ರಂದು ಮಿಮ್ಸ್, 27ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಶಿಬಿರ ನಡೆಯಲಿದೆ ಎಂದು ಡಿಎಚ್‌ಒ ಡಾ.ಕೆ.ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.