ಜಿಲ್ಲೆ

ಜಿಲ್ಲೆಯಲ್ಲಿ ಶಸ್ತ್ರ ಚಿಕಿತ್ಸಾ ಶಿಬಿರ: ಆರೋಗ್ಯ ಇಲಾಖೆಯಿಂದ ಆಯೋಜನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನ.6ರಿಂದ 27ರವರೆಗೆ ಉದರ ದರ್ಶಕ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.

6ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, 8ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, 12ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, 13ರಂದು ಪಾಂಡವಪುರ ಉಪ ವಿಭಾಗ ಸರ್ಕಾರಿ ಆರೋಗ್ಯ ಕೇಂದ್ರ, 14ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, 20ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, 21ರಂದು ಕೆ. ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, 22ರಂದು ಮದ್ದೂರು ತಾಲೂಕು ಆಸ್ಪತ್ರೆ, 26ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, 27 ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಗೆ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.