ಜಿಲ್ಲೆ

ಬಡವರ ನೆರವಿಗೆ ಮುಂದೆ ಬನ್ನಿ, ಮಾಜಿ ಸಚಿವ ಎಂಟಿಬಿ ನಾಗರಾಜ್ ಕರೆ

Bengaluru Rural

ಬೆಂಗಳೂರು: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಪ್ರಗತಿ ಕುಂಠಿತವಾಗಿದೆ, ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ. ಈ ಪರಿಸ್ಥಿತಿಯಲ್ಲಿ ಬಡವರಿಗೆ, ನಿರ್ಗತಿಕರಿಗೆ ಸಹಾಯಹಸ್ತ ಚಾಚುವ ಮೂಲಕ ಮಾನವೀಯತೆ ತೋರಿಸಬೇಕಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ನೆಲಮಂಗಲ ತಾಲೂಕು ಗೊಲ್ಲಹಳ್ಳಿ ಹಾಗೂ ಶಿವಗಂಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬಡ ಜನರಿಗೆ ಪಡಿತರ ಕಿಟ್ ವಿತರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಬಂದಿರುವುದು ಸಂತಸದ ವಿಷಯ. ಸೋಂಕು ಪತ್ತೆಯಾದ ಬೈಲನರಾಸಪುರ ಗ್ರಾಮದ ಕಂಟೇನ್ಮೆಂಟ್ ತೆರವುಗೊಳಿಸಲಾಗಿದೆ. ಆದರೆ ಸಾರ್ವಜನಿಕರು ಮೈಮರೆಯಬಾರದು, ಕರೊನಾ ಬಗ್ಗೆ ಜಾಗರೂಕರಾಗಿರಬೇಕು. ಸರ್ಕಾರದ ನಿಯಮಗಳನ್ನು ಉಲ್ಲಂಸಬಾರದು ಎಂದು ಮನವಿ ಮಾಡಿದರು.