ದಾವಣಗೆರೆಯ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಬುಧವಾರ, ವಿದ್ಯಾರ್ಥಿಗಳು ರಂಗೋಲಿಯಲ್ಲಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬೃಹತ್ ಚಿತ್ರವನ್ನು ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದರು. 
ಜಿಲ್ಲೆ

ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 5ನೇ ವರ್ಷದ ಪುಣ್ಯಸ್ಮರಣೆ

ಮೈಸೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ತುಮಕೂರಿನ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶ್ರೀ ಸಿದ್ಧಗಂಗಾ ಸೇವ ಸಂಘದಿಂದ ಜ.21ರಂದು ನಗರದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9 ಗಂಟೆಗೆ ಮಗರದ ಕೆ.ಆರ್.ಮೊಹಲ್ಲಾದಲ್ಲಿರುವ ನುರೊಂದು ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದು ಸಂಗದ ಅಧ್ಯಕ್ಷ ಚಿಕ್ಕಳಿ ಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಂದಿಧ್ವಜ, ವೀರಗಾಸೆ, ನಗಾರಿ, ಡೊಳ್ಳು ಕುಣಿತ, ಪುಜಾ ಕುಣಿತ, ನಾದಸ್ವರ, ಶಿವ ಭಜನೆ ಸೇರಿದಂತೆ ಇತರ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಲಿವೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಕುದೇರು ಮಠದ ಶ್ರೀ ಗುರುಶಾಂತ ಸ್ವಾಮೀಜಿ, ಮಡಿವಾಳ ಮಠದ ಶ್ರೀ ಇಮ್ಮಡಿ ಮಡಿವಾಳ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ವಹಿಸಲಿದ್ದಾರೆ.

ಶಾಸಕ ಶ್ರೀವತ್ಸ ಹಾಗೂ ಉದ್ಯಮಿ ಯು.ಎಸ್.ಶೇಖರ್ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಬಸವ ಬಳಗದ ಅಧ್ಯಕ್ಷ ಪ್ರದೀಪ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ಮಾಜಿ ಶಾಸಕ ಸಿ.ಎಸ್‌ನಿರಂಜನ ಕುಮಾರ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಪಾಲಿಕೆ ಸದಸ್ಯರಾದ ಸೌಮ್ಯಾ ಉಮೇಶ್, ಮಂಜುನಾಥ್, ಕೆ.ಆರ್.ಬ್ಯಾಂಕ್‌ಅಧ್ಯಕ್ಷ ಪ್ರತಿಧ್ವನಿ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಸುವಂತೆ ಮನವಿ ಮಾಡಿದ್ದಾರೆ.