ಜಿಲ್ಲೆ

ಶಾಲೆ ಸ್ಥಾಪನೆಗೆ ಕೊಡುಗೆ ನೀಡಿದವರ ಸ್ಮರಣೆ

ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಇಂದು ಪದವಿ ಪೂರ್ವ ವಿಭಾಗವನ್ನು ಹೊಂದಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶಾಲೆಯ ಸ್ಥಾಪನೆಗೆ ಅಂದು ಭೂದಾನ ಮಾಡಿದ ಬೆನಗಲ್ ಸಹೋದರರು, ನೇತೃತ್ವ ವಹಿಸಿದ ವೇಣುಗೋಪಾಲ್ ನಾಯಕ್, ವಿದ್ಯಾಭಿಮಾನಿಗಳ ಕೊಡುಗೆ ಮತ್ತು ಶಿಕ್ಷಕ ವೃಂದದ ಶ್ರಮವನ್ನು ಸದಾ ಸ್ಮರಿಸುವ ಅವಶ್ಯಕತೆ ಇದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.

ಉಪ್ಪಿನಂಗಡಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೇ ವಿದ್ಯಾರ್ಥಿ ಸಂಘದ ರಚನಾ ಸಭೆಯಲ್ಲಿ ಮಾತನಾಡಿದರು.

ನಿವೃತ್ತ ಉಪಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಾಸ್ತಾವಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಗುಣವತಿ, ಸದಸ್ಯರಾದ ಜೆ.ಕೆ. ಪೂಜಾರಿ, ಜಯಂತಿ, ಅಬ್ದುಲ್ ಮಜೀದ್, ಅಬೂಬಕ್ಕರ್ ಸಿದ್ದಿಕ್, ಅಬ್ದುಲ್ ರಶೀದ್ ಮಠ, ಖಲಂದರ್ ಶಾಫಿ, ಸಾಮಾಜಿಕ ಮುಂದಾಳು ಎನ್.ಉಮೇಶ ಶೆಣೈ ರಾಮನಗರ, ರೋಟರಿ ಅಧ್ಯಕ್ಷ ನವೀನ್, ಝಕಾರಿಯ ಕೋಡಿಪ್ಪಾಡಿ, ಚಂದ್ರಶೇಖರ ಮಡಿವಾಳ, ಅಬೂಬಕ್ಕರ್ ಸಿದ್ದೀಕ್, ರಘುರಾಮ, ರಾಜೇಶ್ ರಾಮನಗರ, ಶಿಕ್ಷಕರು ಉಪಸ್ಥಿತರಿದ್ದರು. ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪ ಪ್ರಾಂಶುಪಾಲೆ ದೇವಕಿ ಡಿ. ಸ್ವಾಗತಿಸಿದರು. ಶಿಕ್ಷಕಿ ಪೂರ್ಣಿಮಾ ನಾಯಕ್ ವಂದಿಸಿದರು. ಶಿಕ್ಷಕ ಲಕ್ಷ್ಮೀಶ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.