ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಂಜುಂಡಪ್ರಸಾದ್, ಮುನಿರಾಜು, ಎಚ್.ಎನ್.ಬಸವರಾಜು, ನೀಲಕಂಠಪ್ಪ, ಗೋಪಾಲ್, ನಾಗರಾಜು ಇದ್ದರು. 
ಜಿಲ್ಲೆ

ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ

ಲೋಕೇಶ್ ಮನು. ಡಿ

ಗುಂಡ್ಲುಪೇಟೆ: ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಹಿಂದುಳಿದ ಸಮುದಾಯಗಳ ಅನುಕೂಲಕ್ಕೆ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾಹಿತಿ ನೀಡಿದರು.

ಸೋಮವಾರ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಈ ಬಾರಿ ಹೆಚ್ಚಿನ ಅನುದಾನ ದೊರಕದಿದ್ದರೂ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಸಮುದಾಯಗಳ ಬೇಡಿಕೆಯಂತೆ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನು ಇತರ ಸಮುದಾಯಗಳವರು ಭವನ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಇವುಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮುಖಂಡ ಗೋಪಾಲ್, ನಾಗರಾಜು, ಮಲ್ಲೇಶ್, ಸಿದ್ದರಾಜು ಸೇರಿದಂತೆ ಹಲವರು ಇದ್ದರು.