ಬಾಗಲಕೋಟೆ ನಗರದ ಬಿವಿವಿ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ನೂತನ ಕಟ್ಟಡ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು. ಮಹೇಶ ಅಥಣಿ, ಗುರುಬಸವ ಸೂಳಿಭಾವಿ, ಮಹಾಂತೇಶ ಶೆಟ್ಟರ, ಕಟ್ಟಡಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಪ್ರಾಚಾರ್ಯ ಟಿ.ಎಸ್.ಪಾಟೀಲ, ಪ್ರಾಚಾರ್ಯ ಎಸ್.ಜೆ.ಒಡೆಯರ ಇದ್ದರು. 
ಜಿಲ್ಲೆ

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ

ಬಾಗಲಕೋಟೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಉನ್ನತ ದರ್ಜೆಯ ಸೌಲಭ್ಯ ನೀಡುವಲ್ಲಿ ಬಿವಿವಿ ಸಂಘವು ಸದಾ ಮುಂದು ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಮಂಗಳವಾರ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ,ವಾಣಿಜ್ಯ,ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ನೂತನ ಕಟ್ಟಡ ಮತ್ತು ಕೈಗಾರಿಕಾ ತರಬೇತಿ ಸಂಸ್ಥೆಯ ಪೂಜೆ ಹಾಗೂ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉನ್ನತ ಮಟ್ಟದ ಜ್ಞಾನ ಮತ್ತು ಅನುಭವದೊಂದಿಗೆ ಸವಾರ್ಂಗೀಣವಾಗಿ ಅಭಿವೃದ್ಧಿ ಹೊಂದಲು ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ, ವಿಜ್ಞಾನಗಳನ್ನು ಅಳವಡಿಸಲಾಗುತ್ತಿದೆ ಎಂದರು.

ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಕಟ್ಟಡಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಪ್ರಾಚಾರ್ಯ ಟಿ.ಎಸ್.ಪಾಟೀಲ, ಪ್ರಾಚಾರ್ಯ ಎಸ್.ಜೆ.ಒಡೆಯರ ಇದ್ದರು.