ಜಿಲ್ಲೆ

ಸೆಂಟ್ರಲ್ ಕ್ಷೇತ್ರದ ಅಭಿವೃದ್ಧಿಗೆ ಬದ್ಧ

Dharwada - Santosh Vaidya

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಬುಧವಾರ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ವಾರ್ಡ್​ಗಳಲ್ಲಿನ ರಸ್ತೆ, ಯುಜಿಡಿ, ಉದ್ಯಾನ, ಅತಿಕ್ರಮಣ, ನೀರು, ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು.

ಈಗಾಗಲೇ ಮುಖ್ಯ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಮುಖ್ಯರಸ್ತೆಯ ವೃತ್ತಗಳು ಸೇರಿ ಹುಬ್ಬಳ್ಳಿ ಸೌಂದಯರ್ಿಕರಣಕ್ಕಾಗಿ ಹೆಚ್ಚು ಒತ್ತು ನೀಡಲಾಗುವುದು. ರಾಜ್ಯಸರ್ಕಾರದಿಂದ ಅನುದಾನ ಬರುವುದು ವಿಳಂಬವಾಗುತ್ತಿದ್ದು ಇದರಿಂದ ಸಮಸ್ಯೆಗಳು ಆಗುತ್ತಿವೆ. ಇದು ತಮಗೆಲ್ಲರಿಗೂ ಗೊತ್ತಿರುವ ವಿಷಯ ಎಂದು ಹೇಳಿದರು.

ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ತಿಪ್ಪಣ್ಣ ಮಜ್ಜಗಿ, ಸಂತೋಷ ಚವ್ಹಾಣ, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ಮಲ್ಲಿಕಾರ್ಜುನ ಗುಂಡೂರ, ಬೀರಪ್ಪ ಖಂಡೆಕರ್, ಎಂ. ಐ. ನರಗುಂದ, ವೀಣಾ ಬರದ್ವಾಡ, ಉಮಾ ಮುಕುಂದ, ಸೀಮಾ ಮೊಗಲಿ ಶೆಟ್ಟರ್, ರೂಪಾ ಶೆಟ್ಟಿ, ಚಂದ್ರಿಕಾ ಮೇಸ್ತ್ರಿ, ಬಿಜೆಪಿ ಮುಖಂಡ ರವಿ ನಾಯಕ, ಸಿದ್ದು ಮೊಗಲಿಶೆಟ್ಟರ್, ರವಿರಾಜ್ ಕೊಡ್ಲಿ ಇದ್ದರು.