ಸಾಗರ: ಪ್ರತಿ ಸಮುದಾಯಗಳು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ನಗರದಲ್ಲಿ ತಾಲೂಕು ಒಕ್ಕಲಿಗರ ಸಂಘದಿAದ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಒಕ್ಕಲಿಗ ಸಂಘಟನೆಗಳು ಕ್ರಿಯಾಶೀಲರಾಗಿ ಸಮುದಾಯದ ಪ್ರಗತಿಗೆ ಶ್ರಮಿಸಬೇಕು. ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಕೆಲಸ ಆಗಬೇಕು ಎಂದರು.
ಕಾAಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತ ಬಸ್ ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಇದರಿಂದ ಯಾತ್ರಾ ಸ್ಥಳಗಳಿಗೆ ಹೆಚ್ಚಿನ ಜನರು ಪಾಲ್ಗೊಳ್ಳುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಬಂದ ಪರಿಣಾಮ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಮೂಡಿದೆ. ಎಲ್ಲ ಸಮುದಾಯಗಳನ್ನು ಸಮಷ್ಠಿಯಿಂದ ತೆಗೆದುಕೊಂಡು ಹೋಗುವುದೇ ನಮ್ಮ ಪ್ರಮುಖ ಉದ್ದೇಶ ಎಂದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಒಕ್ಕಲಿಗ ಸಂಘದ ತಾಲೂಕು ಅಧ್ಯಕ್ಷ ಎಂ.ಟಿ.ಗುAಡಪ್ಪ ಗೌಡ, ಸಂಘದ ಜಿಲ್ಲಾಧ್ಯಕ್ಷ ಚಂದ್ರಕಾAತ್, ಸಾಗರ ತಾಲೂಕು ಉಪಾಧ್ಯಕ್ಷ ವೆಂಕಟರಮಣ ಗೌಡ, ಕಾರ್ಯದರ್ಶಿ ಬಸವರಾಜ್, ಚುಂಚಾದ್ರಿ ಮಹಿಳಾ ಸಂಘದ ಅಧ್ಯಕ್ಷೆ ಭಾಗೀರಥಿ, ಯುವ ವೇದಿಕೆ ಅಧ್ಯಕ್ಷ ನವೀನ್, ಶಿವಮೊಗ್ಗದ ಸಾನ್ವಿ, ನಗರಸಭಾ ಸದಸ್ಯ ಗಣಪತಿ ಮಂಡಗಳಲೆ, ಮಧುಮಾಲತಿ, ಎನ್.ರಮೇಶ್, ಉಮೇಶ್ ಗೌಡ, ಮಲ್ಲೇಗೌಡ ಇತರರಿದ್ದರು.