ಕೋಟ: ಮೀನುಗಾರಿಕೆ ತೆರಳಿದ್ದ ಸಂದರ್ಭ ದೋಣಿ ಮಗುಚಿ ಮೃತಪಟ್ಟ ಕೋಟ ಕೋಡಿತಲೆ ಹೊಸಬೆಂಗ್ರೆಯ ನಿವಾಸಿ ಶರತ್ ಕುಟುಂಬಕ್ಕೆ ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ 10 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.
ಹೆಚ್ಚುವರಿ 5 ಲಕ್ಷ ರೂ. ಪರಿಹಾರಕ್ಕಾಗಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕಿರಣ್‌ಕುಮಾರ ಕೊಡ್ಗಿ ತಿಳಿಸಿದರು. ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಮೀನುಗಾರರ ಸಮಸ್ಯೆ ಬಗ್ಗೆ ಸಚಿವರಿಗೆ ವಿವರಿಸಿದರು.
ಸ್ಥಳೀಯ ಪ್ರಮುಖರಾದ ಶಂಕರ ಬಂಗೇರ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಿದರು. ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.