ಸುಳ್ಯ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದು ಬಂಟಮಲೆ ಅಕಾಡೆಮಿ ಅಧ್ಯಕ್ಷ ಎ.ಕೆ.ಹಿಮಕರ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಟಕ ವತಿಯಿಂದ ಎಲಿಮಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು.
ದೇವಚಳ್ಳ ಗ್ರಾಪಂ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಸುಳ್ಳಿ, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ನೆಲ್ಲೂರು ಕೆವ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಶುಭಹಾರೈಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಶಿಕ್ಷಕ ವಸಂತ್ ಕುಮಾರ್ ನಾಯಕ್ ಉಪಸ್ಥಿತರಿದ್ದರು.
ಭಾವನಾ ಸುಗಮ ಸಂಗೀತ ಬಳಗದ ಕೆ.ಆರ್.ಗೋಪಾಲಕೃಷ್ಣ ಹಾಗು ಗಾಯಕಿ ಲಿಪಿಶ್ರೀ ಅವರಿಂದ ಪರಿಸರ ಗೀತಾ ಗಾಯನ ನಡೆಯಿತು. ಭಾಷಣ ಸ್ಪರ್ಧೆಯ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕ ಮುರಳೀಧರ ಪುನ್ಕುಟಿ ಸಹಕರಿಸಿದರು. ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಸ್ವಾಗತಿಸಿದರು. ಕಸಾಪ ನಿರ್ದೇಶಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ನಿರೂಪಿಸಿದರು. ಶಿಕ್ಷಕ ವಸಂತ್ ಕುಮಾರ್ ನಾಯಕ್ ವಂದಿಸಿದರು.