ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಆಹ್ವಾನ

ಗಂಗಾವತಿ: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಐಎಎಸ್, ಐಪಿಎಸ್ ಸೇರಿ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ಸಂತೋಷ ಕೆಲೋಜಿ ತಿಳಿಸಿದ್ದಾರೆ.

ವಾಸವಿ ಅಕಾಡೆಮಿಯಿಂದ ಬೆಂಗಳೂರಿನಲ್ಲಿ ಉಚಿತ ತರಬೇತಿ ನೀಡಲಾಗುತ್ತಿದ್ದು, ಉಚಿತ ಶಿಕ್ಷಣ, ಊಟ, ವಸತಿ ಸೌಲಭ್ಯವಿದೆ. ಬೆಂಗಳೂರಿನ ವಿಜಯನಗರ ಬಡಾವಣೆಯಲ್ಲಿ ತರಗತಿಗಳು ನಡೆಯಲಿದ್ದು, 2026ನೇ ವರ್ಷದಲ್ಲಿ ಆಡಳಿತಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪದವೀಧರರು ಯುಪಿಎಸ್‌ಸಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಯಾವುದೇ ಸಮುದಾಯದ ವಿದ್ಯಾರ್ಥಿಗಳು ಅಕಾಡೆಮಿ ನಿಯಮಾನುಸಾರ ಪ್ರವೇಶ ಪಡೆಯಲು ಅವಕಾಶವಿದೆ. ಮಾಹಿತಿಗೆ 9844057944, 9663900439 ಸಂಪರ್ಕಿಸಿ ಎಂದು ತಿಳಿಸಿದ್ದಾರೆ.