ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ಕಾರ್ಯಾಗಾರದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್ ಎಂ. ಮಾಹಿತಿ ನೀಡಿದರು.  
ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ಕಾರ್ಯಾಗಾರ

Karthika K.S

ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಐಕ್ಯುಎಸಿ ಪ್ರೇರಣಾ, ಎನ್‌ಎಸ್‌ಎಸ್ ಘಟಕ, ರಾಜ್ಯಶಾಸ್ತ್ರ ವಿಭಾಗ ವತಿಯಿಂದ ಆಯೋಜಿಸಿದ ‘ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ’ ಕಾರ್ಯಾಗಾರದಲ್ಲಿ ಶಿವಮೊಗ್ಗ ಸ್ಪರ್ಧಾ ಕರ್ನಾಟಕ ಅಕಾಡೆಮಿಯ ಮೋಹನ್‌ಕುಮಾರ್ ಎಂ., ನಂಜಾ ನಾಯ್ಕ, ಶಂಕರ್ ಜಿ. ತರಬೇತಿ ನೀಡಿದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಭಾರತದ ಇತಿಹಾಸ, ಸಾಮಾನ್ಯ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಮಾನಸಿಕ ಸಾಮರ್ಥ್ಯ, ಭೂಗೋಳಶಾಸ್ತ್ರ ವಿಷಯಗಳ ಕುರಿತು ವಿಶೇಷ ತರಬೇತಿ ನೀಡಿದರು.

ಪ್ರಾಂಶುಪಾಲ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ.ಶಿವಕುಮಾರ ಪಿ.ವಿ,. ಚಿತ್ರಾ ಪಡಿಯಾರ್, ನವೀನ್ ಎಚ್.ಜೆ., ಗೀತಾ ಎಸ್. ಕಾರ್ಯಕ್ರಮ ಸಂಘಟಿಸಿದರು. ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಹರ್ಷಿಣಿ ಕಾರ್ಯಕ್ರಮ ನಿರೂಪಿಸಿದರು. ಸಿಂಚನಾ ಸ್ವಾಗತಿಸಿದರು. ಗಣೇಶ್ ವಂದಿಸಿದರು.