ಹಾವೇರಿ: ನಿಮ್ಮ ಮೊಬೈಲ್ ನಂಬರ್ ಮೇಲೆ ಎಫ್ಐಆರ್ ಆಗಿದೆ ಎಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 11.35 ಲಕ್ಷ ರೂ. ಹಣವನ್ನು ಬೇರೆ ಬೇರೆ ಖಾತೆಗಳಿಂದ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಕುರಿತು ಸೈಬರ್ ಕ್ರೆೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಣೆಬೆನ್ನೂರ ತಾಲೂಕಿನ ಚಳಗೇರಿ ಗ್ರಾಮದಲ್ಲಿ ಇಂಜಿನಿಯರ್ ಉದ್ಯೋಗದಲ್ಲಿದ್ದ ಮಹಿಳೆಯೊಬ್ಬರಿಗೆ ಕರೆ ಮಾಡಿರುವ ರಾಹುಲ್ ಎಂಬ ವ್ಯಕ್ತಿ ತಾನು ಜ್ಯೂನಿಯರ್ ಟೆಲಿಕಾಮ್ ಆಪರೇಟರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ.
ನಂತರ ನಿಮ್ಮ ಫೋನ್ ಮೇಲೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರಿಂದ ಎಫ್ಐಆರ್ ದಾಖಲಾಗಿದೆ ಎಂದು ಹೇಳಿ ಹೆದರಿಸಿ ಹಣ ಹಾಕಿಸಿಕೊಂಡು ಮೋಸ ಮಾಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.