ಜಿಲ್ಲೆ

ಮಾಜಿ ಗೃಹಸಚಿವರ ವಿರುದ್ಧ ಠಾಣೆಯಲ್ಲಿ ದೂರು

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಪರಿಶಿಷ್ಟ ಜಾತಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅಖಿಲ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘ ನಗರದ ದೇವರಾಜ ಪೊಲೀಸ್ ಠಾಣೆಗೆ ದೂರು ನೀಡಿದೆ.

ಕಾರ್ಯಕ್ರಮವೊಂದರಲ್ಲಿ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಮತ್ತು ಪ್ರದೇಶದ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ವರ್ಣಭೇದ ಆಚರಿಸಿದ್ದಾರೆ. ಈ ಮೂಲಕ ಖರ್ಗೆ ಹಾಗೂ ದಲಿತ ಸಮುದಾಯವನ್ನು ಅವಮಾನಿಸಿದ್ದಾರೆ. ಆದ್ದರಿಂದ ಆರಗ ಜ್ಞಾನೇಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.

ಸಂಘದ ಪದಾಧಿಕಾರಿಗಳಾದ ಸಿ.ನರೇಂದ್ರ, ಹುಯಿಲಾಳು ರಾಮಸ್ವಾಮಿ, ನಿಂಗಯ್ಯ, ಪ್ರಮೋದ್‌ಕುಮಾರ್ ಇತರರಿದ್ದರು.