ಮಂಡ್ಯ: ತಾಲೂಕು ಕಚೇರಿಯಲ್ಲಿ ಅ.9ರಂದು ಮಂಡ್ಯ ಲೋಕಾಯುಕ್ತ ವಿಭಾಗದ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಮಂಡ್ಯ ತಾಲೂಕಿಗೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿರುವ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಅಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಲ್ಲಿಸಲು ಅವಕಾಶವಿದೆ. ಸಭೆಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಎಚ್.ಟಿ.ಸುನೀಲ್ಕುಮಾರ್, ಇನ್ಸ್‌ಪೆಕ್ಟರ್‌ಗಳಾದ ಆರ್.ಎಂ.ಮೋಹನ್‌ರೆಡ್ಡಿ, ಎಂ.ಜಯರತ್ನಾ, ಬಿ.ಪಿ.ಬ್ಯಾಟರಾಯಗೌಡ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.