ಜಿಲ್ಲೆ

ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕ

ಕೋಲಾರ ಡೆಸ್ಕ್

ಕೋಲಾರ: ದೇಶದ ಬಡ ಹಾಗೂ ಮಧ್ಯಮ ವರ್ಗದವರಿಗೆ ಬಂಪರ್​ ತೆರಿಗೆ ವಿನಾಯಿತಿ ಸಿಕ್ಕಿದೆ. ಒಟ್ಟಾರೆ ಬಜೆಟ್​ ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್​ ಬಜೆಟ್​ ಕುರಿತು ಪ್ರತಿಕ್ರಿಯಿಸಿದ್ದಾರೆ.

ಅತಿ ಸಣ್ಣ ಹಾಗೂ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಒತ್ತೇಜನ ನೀಡಿರುವುದು ಗಮನರ್ಹವಾಗಿದೆ. ಕೃಷಿ ಕ್ಷೇತ್ರ ಮತ್ತಷ್ಟು ಸಮೃದ್ಧಿಯಾಗಲು ಮುಂದಾಲೋಚನೆ ಇಟ್ಟುಕೊಂಡು ಪಿಎಂ ಫಸಲ್​ ಭೀಮಾ ಯೋಜನೆ ವ್ಯಾಪ್ತಿಗೆ ಇನ್ನೂ ಹೆಚ್ಚಿನ ರೈತರು. ಶೀಘ್ರಗತಿಯಲ್ಲಿ ವಿಮಾ ಸೌಲಭ್ಯ ಸಿಗುವಂತೆ ಮಾಡಲಾಗಿದೆ ಇರು ಅನ್ನದಾತರ ಸುರಕ್ಷತೆಗೆ ಒತ್ತು ಸಿಕ್ಕಿದಂತಾಗಿದೆ ಎಂದು ತಿಳಿಸಿದರು.

ಕೃಷಿ ತಂತ್ರಜ್ಞಾನ ಹಾಗೂ ಕೃಷಿ ಆಧಾರಿತ ಸ್ಟಾರ್ಟ್​ಪ್​ಗಳ ಉತ್ತೇಜನಕ್ಕೆ 1 ಲಕ್ಷ ಕೋಟಿ ರೂ. ಮೀಸಲು. ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಅತ್ಯಾಧುನಿಕ ನೀರಾವರಿ ಸೌಲಭ್ಯಕ್ಕೆ ಆದ್ಯತೆ ನೀಡಲಾಗಿದೆ. ಬಜೆಟ್​ ಸಹಿಸಲಾಗದವರು ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು.

ಗ್ರಾಮೀಣ ಪ್ರದೇಶದಲ್ಲಿಕೃಷಿ ಮೂಲಸೌಕರ್ಯ ಉತ್ತಮಪಡಿಸಲು, ಅತ್ಯುತ್ತಮ ಶೀತಲೀಕರಣ ಕೇಂದ್ರಗಳ ಸ್ಥಾಪನೆ, ಪಿಎಂ ಧನಧಾನ್ಯ ಯೋಜನೆ ಭಾರತೀಯ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ ಇದಾಗಿದೆ. ದೇಶೀಯ ಕೃಷಿಗೆ ವಿಶ್ವದರ್ಜೆಯ ಮೂಲಸೌಕರ್ಯ, ಕೃಷಿ ಉತ್ಪನ್ನಗಳ ದಾಸ್ತಾನಿಗೆ ಅತ್ಯುತ್ತಮ ವ್ಯವಸ್ಥೆ, ರಫ್ತಿಗೆ ಉತ್ತೇಜನ, ರೈತರಿಗೆ ಹೆಚ್ಚು ಆದಾಯ ದೊರೆಯಲಿದೆ ಎಂದು ತಿಳಿಸಿದರು.

ಕೃಷಿ ಉತ್ಪಾದನೆಗೆ ಆದ್ಯತೆ

ಕೋಲಾರ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮಂಡನೆ ಮಾಡಿರುವ ಆಯ&ವ್ಯಯವು ಎಲ್ಲ ಕ್ಷೇತ್ರಗಳಿಗೆ ನ್ಯಾಯಬ್ಧವಾಗಿದೆ. ಅದಲ್ಲೂ ರೈತರ ಹಾಗೂ ಮಹಿಳೆಯರ ಸಬಲೀಕರಣಕ್ಕಾಗ ಪೂರಕ ಯೋಜನೆಗಳನ್ನು ಘೋಷಣೆ ಮಾಡಿರುವುದು ಸಂತಸ ತಂದಿದೆ ಎಂದು ಜೆಡಿಎಸ್​ ಮುಖಂಡ ಸಿಎಂಆರ್​ ಶ್ರೀನಾಥ್​ ಹೇಳಿದರು.

ಕೇಂದ್ರ ಬಜೆಟ್​ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ ಅವರು, ಎಲ್ಲದಕ್ಕಿಂತ ಹೆಚ್ಚಾಗಿ 12 ಲಕ್ಷ ರೂ.ತನಕ ತೆರಿಗೆ ವಿನಾಯಿತಿ ನೀಡಿರುವುದು ಮಧ್ಯವ ವರ್ಗದವರಿಗೆ ಅನುಕೂಲವಾಗಿದೆ. ಇದು ಒಂದು ರೀತಿ ಬಡವರ ಆರ್ಥಿಕ ಶಕ್ತಿ ಹೆಚ್ಚಿಸುವಂತಾಗಿದೆ ಎಂದು ಅಭಿಪ್ರಾಯಪಟ್ಟರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿ ಜತೆಗೆ ನವೋಧ್ಯಮಗಳನ್ನು ಸ್ಥಾಪಿಸಲು ಸುಮಾರು 20 ಸಾವಿರ ಕೋಟಿ ಹಣ ಮೀಸಲಿಟ್ಟಿರುವುದು ಸಮ ಸಮಾಜ ನಿಮಾರ್ಣ ಮಾಡುವ ಕಲ್ಪನೆಯಾಗಿದೆ. 100 ಜಿಲ್ಲೆಯನ್ನು ಕೃಷಿ ಜಿಲ್ಲೆಯನ್ನಾಗಿ ಗುರುತಿಸಿ ಕೃಷಿ ಉತ್ಪಾದನೆಗಳನ್ನು ಹೆಚ್ಚಿಸಿ ಆರ್ಥಿಕವಾಗಿ ಸದೃಢವಾಗಲು ಯೋಜನೆ ರೂಪಿಸಿರುವುದು, ಕಡಿಮೆ ಕೃಷಿ ಪ್ರದೇಶಗಳಲ್ಲಿ ಹೆಚ್ಚಿನ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ನಿಗದಿಗೊಳಿಸಿರುವುದು ಸ್ವಾಗತಾರ್ಹ ಎಂದರು. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಿಗಳನ್ನು ಪ್ರೋತ್ಸಾಹಿಸಿ ಆರ್ಥಿಕ ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಶೇ.2.5 ರಷ್ಟು ಹೆಚ್ಚಿನ ಹಣ ನಿಗದಿಪಡಿಸಲಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಪರ ಯೋಜನೆಗಳು ಕಾರ್ಯಗತಗೊಳಿಸಲಾಗಿದೆ ಎಂದು ತಿಳಿಸಿದರು. ಕೃಷಿ ಕ್ಷೇತ್ರದಲ್ಲಿ ಆತ್ಮನಿರ್ಭರ್​ ಯೋಜನೆಯಲ್ಲಿ ರಸಗೊಬ್ಬರಗಳು ಹಾಗೂ ಪೂರಕ ಸಲಕರಣೆಗಳನ್ನು ಅತಿ ಹೆಚ್ಚು ರಿಯಾಯಿತಿ ದರದಲ್ಲಿ ನೀಡಿ ಪ್ರೋತ್ಸಾಹಿಸಲಾಗಿದೆ. ಈ ಬಜೆಟ್​ ದೇಶದ ಜನತೆ ನೆಮ್ಮದಿ ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಆರ್ಥಿಕವಾಗಿ ಸದೃಢವಾಗಿ ವಿಶ್ವದಲ್ಲೇ ಭಾರತ ಬಲಿಷ್ಠವಾಗಲಿದೆ ಎಂದರು.