ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಸ್ವತಃ ಛಾಯಾಚಿತ್ರ ಸಮೇತ ಸಮೀಕ್ಷೆ ಮಾಡಬಹುದು. ರೈತರ ಬೆಳೆ ಸಮೀಕ್ಷೆ ಮೊಬೈಲ್ ತಂತ್ರಾಂಶ ಅಥವಾ ಖಾಸಗಿ ನಿವಾಸಿಗಳ ಬೆಳೆ ಸಮೀಕ್ಷೆ ಮೊಬೈಲ್ ತಂತ್ರಾಂಶ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಬಹುದು. ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ರೈತರು ಒಂದು ವಾರದಲ್ಲಿ ರ್ಪೂಣಗೊಳಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕಿರಣಕುಮಾರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ ಬೆಳೆ ವಿಮೆ ಯೋಜನೆಯ ಸರ್ವೇ ನಂಬರ್ವಾರು ಬೆಳೆ ಪರಿಶೀಲನೆ ನಡೆಯಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿ ಗುರುತಿಸಲು, ಆರ್ಟಿಸಿಯಲ್ಲಿ ಬೆಳೆ ವಿವರ ದಾಖಲಾತಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಅಥವಾ ಪ್ರಕತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ಧಪಡಿಸಲು, ಬ್ಯಾಂಕ್ಗಳಲ್ಲಿ ಬೆಳೆ ಸಾಲ ಪಡೆಯುವ ಮತ್ತು ಅರ್ಹ ಲಾನುಭವಿಗಳ ಪಟ್ಟಿ ತಯಾರಿಸುವಾಗ ಬೆಳೆ ಸಮೀಕ್ಷೆ ಆಧಾರವಾಗಿಟ್ಟಕೊಂಡು ಸಿದ್ಧಪಡಿಸುವುದರಿಂದ ರೈತರು ತಪ್ಪದೆ ತಮ್ಮ ಜಮೀನಿನಲ್ಲಿನ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಬೆಳೆಗಳ ವಿವರವನ್ನು ಆ್ಯಪ್ನಲ್ಲಿ ನಮೂದಿಸಬೇಕು.
ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿ, ಸಹಾಯಕ ತೋಟಗಾರಿಕೆ ಅಧಿಕಾರಿ, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪಕಿರ್ಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.