ಸಿರವಾರದಲ್ಲಿ ರಸ್ತೆ ಕಾಮಗಾರಿಗೆ ಸಚಿವ ಎನ್.ಎಸ್.ಬೋಸರಾಜು, ಶಾಸಕ ಜಿ.ಹಂಪಯ್ಯ ನಾಯಕ ಚಾಲನೆ ನೀಡಿದರು. ಪಪಂ ಅಧ್ಯಕ್ಷ ವೈ.ಭೂಪನಗೌಡ, ಪ್ರಮುಖರಾದ ಬ್ರಿಜೇಶ ಪಾಟೀಲ್, ಚುಕ್ಕಿ ಸೂಗಪ್ಪ ಸಾಹುಕಾರ, ಶರಣಯ್ಯ ಗುಡದಿನ್ನಿ ಇತರರಿದ್ದರು. 
ಜಿಲ್ಲೆ

ನಿಗದಿಯಂತೆ ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಸಿರವಾರ: ಪಟ್ಟಣದ ಆರ್‌ಕೆ ಕಮಲಮ್ಮ ಕಾಲನಿಯ ವೆಂಕಟೇಶ್ವರ ದೇವಸ್ಥಾನದಿಂದ ಮರಾಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ಕೆಕೆಆರ್‌ಡಿಬಿ ಮೈಕ್ರೋ ಯೋಜನೆಯಡಿ (2024-25 ನೇ ಸಾಲಿನ) ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಕೈಗೊಂಡಿದ್ದು, ನಿಗದಿತ ಸಮಯದಲ್ಲಿ ಹಾಗೂ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಬೋಸರಾಜು ಸೂಚಿಸಿದರು.

ಪಪಂ ಅಧ್ಯಕ್ಷ ವೈ.ಭೂಪನಗೌಡ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬ್ರಿಜೇಶ ಪಾಟೀಲ್, ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ, ಶರಣಯ್ಯ ನಾಯಕ ಗುಡದಿನ್ನಿ, ತಹಸೀಲ್ದಾರ್ ರವಿ ಎಸ್.ಅಂಗಡಿ, ತಾಪಂ ಇಒ ಶಶಿಧರ ಸ್ವಾಮಿ, ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ ಇತರರಿದ್ದರು.