ರಾಯಚೂರು ಟಿಪ್ಪುಸುಲ್ತಾನ ಉದ್ಯಾನವನ ಹಾಗೂ ಪ್ರಾಂಗಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಬೇಕಾಗಿದೆ. ಕಾಮಗಾರಿ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಬೇಕೆಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೋಹನ್ ಕೃಷ್ಣ ಅವರಿಗೆ ಸೂಚನೆ ನೀಡಿದರು.
ನಗರದ ಟಿಪ್ಪು ಸುಲ್ತಾನ ಉದ್ಯಾನವನದ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ ಅವರೊಂದಿಗೆ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಮಾತನಾಡಿ, ನಗರದ ಹೃದಯ ಭಾಗದಲ್ಲಿರುವ ಈ ಪ್ರಾಂಗಣ ಕಾಮಗಾರಿ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು ವೈಜ್ಞಾನಿಕವಾಗಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಮಾಜಿ ನಗರಸಭೆ ಸದಸ್ಯ ಮೊಹ್ಮದ್ ಶಾಲಂ, ಪಾಲಿಕೆಯ ಉಪಾಧ್ಯಕ್ಷ ಸಾಜಿದ್ ಸಮೀರ, ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ನರಸಿಂಹಲು ಮಾಡಗಿರಿ, ಜಿ ಶಿವಮೂರ್ತಿ, ಬಿ.ರಮೇಶ, ತಿಮ್ಮಾರಡ್ಡಿ, ಕುರಬದೊಡ್ಡಿ ಆಂಜನೇಯ್ಯ ಸೇರಿ ಅನೇಕರು ಇದ್ದರು.