ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಅರಕಲಗೂಡು ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳನ್ನು ಹಾಸನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಪ್ರಾಂಶುಪಾಲ ಮಹೇಶ್ ಹೊಡೆನೂರು ಹಾಗೂ ಉಪನ್ಯಾಸಕರು ಅಭಿನಂದಿಸಿದರು. 
ಜಿಲ್ಲೆ

ಬಿಜಿಎಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ವಸಂತಕುಮಾರ್ ಬಿ

ಅರಕಲಗೂಡು: ತಾಲೂಕಿನ ಕೇರಳಾಪುರದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ ಲಭಿಸಿದೆ.

ಬಾಲಕರ ವಿಭಾಗದಲ್ಲಿ ಖೋಖೋ ಪ್ರಥಮ, ಬಾಲಕಿಯರ ವಿಭಾಗದಲ್ಲಿ ಖೋಖೋ ಪ್ರಥಮ, ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಥ್ರೋ ಬಾಲ್‌ನಲ್ಲಿ ಪ್ರಥಮ, ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾವಳಿ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾವಳಿ ದ್ವಿತೀಯ, ಬಾಲಕರ ವಿಭಾಗದಲ್ಲಿ ಟೆನ್ನಿ ಕಾಯ್ಟ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಟೆನ್ನಿ ಕಾಯ್ಟ ಪ್ರಥಮ, ಬಾಲಕರ ವಿಭಾಗದಲ್ಲಿ 400 ಮೀ. ರಿಲೇ ಪ್ರಥಮ, ಬಾಲಕಿಯರ ವಿಭಾಗದಲ್ಲಿ 400 ಮೀ. ರಿಲೇ ದ್ವಿತೀಯ, ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ 800 ಮೀ. ರಿಲೇ ದ್ವಿತೀಯ, ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ 100 ಮೀ. ಓಟ ಪ್ರಥಮ, ಬಾಲಕರ ವಿಭಾಗದಲ್ಲಿ 200 ಮೀ. ಓಟ ತೃತೀಯ, ಬಾಲಕಿಯರ ವಿಭಾಗದಲ್ಲಿ 200 ಮೀ. ಓಟ ಪ್ರಥಮ, ಬಾಲಕರ ವಿಭಾಗದಲ್ಲಿ 400 ಮೀ. 800 ಮೀ, 5000 ಮೀ. ಓಟ ದ್ವಿತೀಯ, ಬಾಲಕರು ಹಾಗೂ ಬಾಲಕಿಯರ ವಿಭಾಗದಲ್ಲಿ ಗುಂಡು ಎಸೆದ ಪ್ರಥಮ, ಬಾಲಕರು ಹಾಗೂ ಬಾಲಕಿಯರ ವಿಭಾಗದಲ್ಲಿ ಡಿಸ್ಕಸ್ ಥ್ರೋ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಹ್ಯಾಮರ್ ಥ್ರೋ ಪ್ರಥಮ, ಬಾಲಕರ ವಿಭಾಗದಲ್ಲಿ ಟ್ರಿಪಲ್ ಜಂಪ್ ಪ್ರಥಮ, ಬಾಲಕಿಯರ ವಿಭಾಗದಲ್ಲಿ ಉದ್ದ ಜಿಗಿತ ಪ್ರಥಮ, ಬಾಲಕರ ವಿಭಾಗದಲ್ಲಿ ಎತ್ತರ ಜಿಗಿತ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ವಾಕ್ ರೇಸ್ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ದೊರೆತಿದೆ.

ಬಾಲಕಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್ ಮತ್ತು ಬಾಲಕಿಯರ ಹಾಗೂ ಬಾಲಕರ ವಿಭಾಗಕ್ಕೆ ಸಮಗ್ರ ಪ್ರಶಸ್ತಿ ಮತ್ತು ಕಾಲೇಜು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.