ಮದ್ದೂರು ಪಟ್ಟಣದ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಹಾಗೂ ವಿವಿಧ ಸಂಘ ಸಂಸ್ಥೆಗಳ ಜತೆಗೂಡಿ ಶಾಸಕ ಕೆ.ಎಂ.ಉದಯ್ ಧ್ವಜಾರೋಹಣ ನೆರವೇರಿಸಿದರು. ಅಪೂರ್ವಚಂದು, ಕೋಕಿಲಾ ಅರುಣ್, ಪ್ರಸನ್ನಕುಮಾರ್, ವನಿತಾ, ಚಲುವರಾಜು, ಕೆ.ಎಸ್.ಸುನೀಲ್ ಇದ್ದರು.  
ಜಿಲ್ಲೆ

ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿ

ಮದ್ದೂರು: ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಕುರುಹಾದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 2 ಕೋಟಿ ರೂ.ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಪಟ್ಟಣದ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಈ ಹಿಂದೆಯೇ ಧ್ವಜ ಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹೀಗಾಗಿ ಸೌಧದ ಅಭಿವೃದ್ಧಿಗೆ ಈಗಾಗಲೇ 2 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.

ಮುಂದಿನ ಸ್ವಾತಂತ್ರೊೃೀತ್ಸವದ ವೇಳೆಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಸೌಧವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಉದಯ್ ಆಶ್ವಾಸನೆ ನೀಡಿದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು, ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಉಪ ತಹಸೀಲ್ದಾರ್ ಸೋಮಶೇಖರ್, ಚನ್ನೇಗೌಡ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಸ್ವರೂಪ್‌ಚಂದ್, ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚಲುವರಾಜ್, ಕಸಾಪ ತಾಲೂಕು ಅಧ್ಯಕ್ಷ ಕೆ.ಎಸ್.ಸುನೀಲ್ ಕುಮಾರ್ ಇತರರು ಇದ್ದರು.